• Home
  • ದೈನಂದಿನ-ಸುದ್ದಿ
  • ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ರಾಗಿ ಖರೀದಿಸಲು ನೋಂದಣಿ ಆರಂಭ
Image

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ರಾಗಿ ಖರೀದಿಸಲು ನೋಂದಣಿ ಆರಂಭ

ಸಂಜೆ ಇಂಪು, ಮಂಡ್ಯ:ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಸಾಮಾನ್ಯ ಪ್ರತಿ ಕ್ವಿಂಟಾಲ್ ರೂ.2300 ಹಾಗೂ ಎ ಗ್ರೇಡ್ ಪ್ರತಿ ಕ್ವಿಂಟಾಲ್‍ಗೆ ರೂ.2320 ರಂತೆ ಹಾಗೂ ಪ್ರತಿ ಕ್ವಿಂಟಾಲ್‍ಗೆ ರಾಗಿಗೆ ರೂ.4290 ರಂತೆ ಖರೀದಿಸಲು ತಾಲ್ಲೂಕು ಕೇಂದ್ರಗಳಲ್ಲಿ ನೊಂದಣಿ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಅಧ್ಯಕ್ಷರಾದ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದ್ದಾರೆ.

ಫೂಟ್ಸ್ ದತ್ತಾಂಶದಲ್ಲಿ ರೈತರು ನೀಡಿರುವ ಬ್ಯಾಂಕ್ ಖಾತೆಗೆ ಡಿಬಿಟಿ ಮುಖಾಂತರ ನೇರವಾಗಿ ರೈತರ ಖಾತೆಗೆ ಹಣ ಸಂದಾಯ ಮಾಡಲಾಗುವುದು. ಆದ್ದರಿಂದ ರೈತರು ಬ್ಯಾಂಕ್ ಖಾತೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಆಗಿರುವುದನ್ನು ಮತ್ತು ಎನ್‍ಪಿಸಿಎಲ್ ಮ್ಯಾಪಿಂಗ್ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಖರೀದಿ ಕೇಂದ್ರಕ್ಕೆ ಆಧಾರ್ ಕಾರ್ಡ್, ಪಹಣಿ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯನ್ನು ನೀಡಬೇಕು.

ರೈತರು ತಾವು ನೀಡುವ ಎಲ್ಲಾ ದಾಖಲಾತಿಗಳಲ್ಲಿಯೂ ಒಂದೇ ಹೆಸರು ನಮೂದಾಗಿರತಕ್ಕದ್ದು, ಮತ್ತು ರಾಗಿ ತಂದು ಖರೀದಿ ಕೇಂದ್ರದಲ್ಲಿ ರಾಶಿ ಹಾಕಬೇಕು. ರಾಗಿ ಗುಣಮಟ್ಟ ಪರಿಶೀಲಿಸಲು ನೇಮಿಸಲ್ಪಟ್ಟ ಗ್ರೇಡರ್ಸ್ ದಾಸ್ತಾನಿನ ಗುಣಮಟ್ಟವನ್ನು ಪರಿಶೀಲಿಸಿ ಉತ್ತಮ ಗುಣಮಟ್ಟವೆಂದು ಧೃಢಪಟ್ಟರೆ ಮಾತ್ರ ಖರೀದಿಸಲಾಗುವುದು. ಗುಣಮಟ್ಟ ಸರಿಯಿಲ್ಲವೆಂದು ದೃಢಪಡಿಸಿದ್ದಲ್ಲಿ ರೈತರು ತಮ್ಮ ಸ್ವಂತ ಖರ್ಚಿನಿಂದ ಹಿಂದಕ್ಕೆ ತೆಗೆದುಕೊಂಡು ಹೋಗಬೇಕು.

ಪ್ರತಿ ರೈತರಿಂದ ಪ್ರತಿ ಎಕರೆಗೆ ರಾಗಿ 10.00 ಕ್ವಿಂಟಾಲ್ ನಂತೆ ಗರಿಷ್ಠ 20 ಕ್ವಿಂಟಾಲ್ ರಾಗಿಯನ್ನು ಮತ್ತು ರೈತರಿಂದ ಭತ್ತವನ್ನು ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಗರಿಷ್ಟ 50 ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುವುದು. ಖರೀದಿಗೆ ಸಂಬಂಧಿಸಿದ ಯಾವುದೇ ದೂರುಗಳಿದ್ದಲ್ಲಿ ತಹಶೀಲ್ದಾರರು, ಉಪವಿಭಾಗಾಧಿಕಾರಿ, ಜಂಟಿ ನಿರ್ದೇಶಕರು (ಆಹಾರ), ಹಾಗೂ ಕೃಷಿ ಮಾರುಕಟ್ಟೆ ಅಧಿಕಾರಿಗಳ ಗಮನಕ್ಕೆ ತರಬಹುದು. ಅಥವಾ ದೂರವಾಣಿ ಸಂಖ್ಯೆ -08192-296770 ಗೆ ಕರೆಮಾಡಬಹುದು ಎಂದು ಅವರು ತಿಳಿಸಿದ್ದಾರೆ.

Releated Posts

ಕೆಐಐಟಿ-ಡಿಯು ವಿಶ್ವವಿದ್ಯಾಲಯಕ್ಕೆ ಒಡಿಶಾದಲ್ಲಿ ಅಗ್ರಸ್ಥಾನ. ವಿವಿಯು ಏಷ್ಯಾದಲ್ಲೇ 294 ನೇ ಸ್ಥಾನ ಪಡೆದಿದೆ

ಸಂಜೆ ಇಂಪು,ಸುದ್ದಿ ಬೆಂಗಳೂರು: ಇಲ್ಲಿನ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ರ್ಟಿಯಲ್ ಟೆಕ್ನಾಲಜಿ (ಕೆಐಐಟಿ-ಡಿಯು) ಡೀಮ್ಡ್ ವಿಶ್ವವಿದ್ಯಾಲಯವು ಕ್ಯೂಎಸ್ ಏಷ್ಯಾ ವಿಶ್ವವಿದ್ಯಾಲಯ ರ್ಯಾಂಕಿಂಗ್ 2026 ನಲ್ಲಿ…

ByByRavi Lalipalya Nov 7, 2025

ಕಬ್ಬು ಬೆಳೆಗಾರರ ನಿರಂತರಹೋರಾಟಕ್ಕೆ ಕೊನೆಗೂಫಲ: ಪ್ರತಿ ಟನ್ ಕಬ್ಬಿಗೆ ರೂ 3,300 ನಿಗದಿ….

ಸಂಜೆ ಇಂಪು, ಬೆಂಗಳೂರು: ರೈತರ ಪ್ರತಿಭಟನೆಯ ಕಿಚ್ಚು ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ…

ByByRavi Lalipalya Nov 7, 2025

ಶ್ರೀರಂಗಪಟ್ಟಣದಲ್ಲಿ ರಂಗನಾಥನ ಬ್ರಹ್ಮ ರಥೋತ್ಸವ.

ನಾಳೆ ನಡೆಯಲಿರೊ ರಂಗನಾಥಸ್ವಾಮಿಯ ಬ್ರಹ್ಮರಥೋಥ್ಸವಕ್ಕೆ ‌ದೇವಾಲಯದ ಆಡಳಿತ ಮಂಡಳಿ ಸಕಲ ರೀತಿಯಲ್ಲೂ ಸಿದ್ದವಾಗಿದೆ ಬೆಳಿಗ್ಗೆ 6 ಗಂಟೆಗೆ ಸೂರ್ಯ ಚಂದ್ರ ಮಂಡಲದ ರಥಸಪ್ತಮಿ ನಡೆಯಲಿದ್ದು…

ByByRavi Lalipalya Feb 4, 2025

ಮಂಡ್ಯ : ಕುಡಿಯುವ ನೀರು ಪೂರೈಕೆಗೆ ಒತ್ತಾಯ ಖಾಲಿಕೊಡದೊಂದಿಗೆ ಗ್ರಾಮಸ್ಥರ ಪ್ರತಿಭಟನೆ

ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಚಿನ್ನಾಯಕನಹಳ್ಳಿ ಗ್ರಾಮಸ್ಥರು ಗ್ರಾ ಪಂ ಕಚೇರಿ ಎದುರು ಖಾಲಿ ಕೊಡದೊಂದಿಗೆ ಪ್ರತಿಭಟನೆ ನಡೆಸಿದರು.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಚಿನ್ನಾಯಕನಹಳ್ಳಿಯಲ್ಲಿ…

3 Comments Text
  • goldusdt says:
    Your comment is awaiting moderation. This is a preview; your comment will be visible after it has been approved.
    Finally found a spot that explains the gold-backed stablecoin concept clearly. It is exactly what my portfolio needed for some stability. goldusdt
  • vnmmoo88 says:
    Your comment is awaiting moderation. This is a preview; your comment will be visible after it has been approved.
    I started using this site last month and I am already hooked. The interface is clean and I never had to wait long for my requests to be processed. It is perfect for those quiet nights when I just want to enjoy some leisure time. Highly recommended for everyone looking for a steady platform. vnmmoo88
  • trmarkajbet says:
    Your comment is awaiting moderation. This is a preview; your comment will be visible after it has been approved.
    I switched from my old site last month and I do not regret the move at all. Live streaming for matches works flawlessly and the bet slip is super intuitive. Withdrawals to local wallets happen within minutes which makes life so much easier. Keep up the great work team. trmarkajbet
  • Leave a Reply

    Your email address will not be published. Required fields are marked *

    Scroll to Top