ಸಂಜೆ ಇಂಪು, ಮಂಡ್ಯ:ವಿದ್ಯಾರ್ಥಿಗಳು ಇಂದಿನ ಯುಗಕ್ಕೆ ಅಗತ್ಯವಿರುವ ಎಲ್ಲಾ ಜೀವನ ಹಾಗೂ ತಂತ್ರಜ್ಞಾನ, ವಿಶೇಷವಾಗಿ ಡಿಜಿಟಲ್ ಕೌಶಲ್ಯಗಳನ್ನು ಅರಿತಿರಬೇಕು ಎಂದು ಪ್ರಾಧ್ಯಾಪಕ ಡಾ. ವೆಂಕಟೇಶ್ ಬಾಬು ಅವರು ತಿಳಿಸಿದರು.
ಬುಧವಾರ ಶ್ರೀ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಕೋಶದ ಪ್ರೇರಣಾ ವಿಭಾಗದ ವತಿಯಿಂದ ಸ್ನಾತಕೊತ್ತರ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಡಿಜಿಟಲ್ ಸ್ಕಿಲ್ಸ್ ಸರ್ಟಿಫಿಕೇಟ್ ಕೋರ್ಸ್ ಅನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಕಂಪ್ಯೂಟರ್ ಆಧರಿತ ಉದ್ಯೋಗದ ಕೌಶಲಗಳನ್ನು ಹೊಂದಿದ್ದರೆ ಉದ್ಯೋಗಗಳು ನಮ್ಮನ್ನ ಹುಡುಕಿಕೊಂಡು ಬರುತ್ತವೆ ಎಂದು ತಿಳಿಸಿದರು.

ಕಾಲೇಜಿನ ಅಲ್ಮನಿ ವಿದ್ಯಾರ್ಥಿ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾಗಿರುವ ಶ್ರೀ ಮಧು ಜಿ.ಟಿ ರವರು ತಾನು ಈ ಕಾಲೇಜಿನಲ್ಲಿ ಕಲಿಯುವಾಗ ಇಲ್ಲದಿರುವ ಎಲ್ಲಾ ಸೌಲಭ್ಯಗಳು/ ಅವಕಾಶಗಳು ಈಗ ದೊರೆಯುತ್ತಿವೆ ವಿದ್ಯಾರ್ಥಿಗಳು ಅವುಗಳನ್ನು ಬಳಸಿಕೊಂಡು ತಮ್ಮ ಭವಿಷ್ಯ ಕಟ್ಟಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಅಮೃತೇಶ್ವರ ಬಿ.ಜಿ ಅವರು ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ಡಿಜಿಟಲ್ ಸ್ಕಿಲ್ ಹಾಗೂ ಇಂಗ್ಲಿಷ್ ಸಂವಹನ ಜ್ಞಾನದ ಅವಶ್ಯಕತೆ ಇದ್ದು ಪದವಿಯೊಂದಿಗೆ ಡಿಜಿಟಲ್ ಕೌಶಲ್ಯಗಳ ಅರಿ ವನ್ನು ವಿದ್ಯಾರ್ಥಿಗಳಿಗೆ ಕಾಲೇಜಿನ ಉದ್ಯೋಗ ಕೋಶ ವೇದಿಕೆಯು ಉಚಿತವಾಗಿ ನೀಡುತ್ತಿದೆ ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಲು ಕರೆ ನೀಡಿದರು.
ಡಾ. ಮಂಜುಳಾ ಟಿ ಪ್ಲೇಸ್ಮೆಂಟ್ ಸೆಲ್ ಸಂಚಾಲಕರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ವರ್ತಮಾನದ ಜಗತ್ತಿಗೆ ಡಿಜಿಟಲ್ ಕೌಶಲ ವಿಶೇಷವಾಗಿ ವಿದ್ಯಾರ್ಥಿ ಗಳು ಅತಿ ತುರ್ತಾಗಿ ಕಲಿಯುವ ಅವಶ್ಯಕತೆ ಇದೆ ಎಂದರು.

ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ನಡೆದ ಈ ಕಾರ್ಯಕ್ರಮದಲ್ಲಿ ಡಿಜಿಟಲ್ ಸ್ಕಿಲ್ಸ್ ಸರ್ಟಿಫಿಕೇಟ್ ಕೋರ್ಸ್ ಹಾಗೂ ವಾರದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಉದ್ಘಾಟಿಸಲಾಯಿತು ಇಂದಿನಿಂದ ಸತತ 15 ದಿನಗಳು ಮದ್ಯಾಹ್ನ 2:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ವಿದ್ಯಾರ್ಥಿಗಳಿಗೆ ಉಚಿತವಾಗಿ ಡಿಜಿಟಲ್ ಸ್ಕಿಲ ಬಗ್ಗೆ ಪ್ರಾಯೋಗಿಕ ತರಗತಿಗಳು ಮತ್ತು ಉಪನ್ಯಾಸಗಳನ್ನು ಹಮ್ಮಿಕೊಳ್ಳಲಾಗಿದೆ ಪಿಜಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಲು ಇದೇ ಸಂದರ್ಭದಲ್ಲಿ ಸೂಚಿಸಲಾಯಿತು.








