ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಚಿನ್ನಾಯಕನಹಳ್ಳಿ ಗ್ರಾಮಸ್ಥರು ಗ್ರಾ ಪಂ ಕಚೇರಿ ಎದುರು ಖಾಲಿ ಕೊಡದೊಂದಿಗೆ ಪ್ರತಿಭಟನೆ ನಡೆಸಿದರು.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಚಿನ್ನಾಯಕನಹಳ್ಳಿಯಲ್ಲಿ 100 ಕ್ಕೂ ಹೆಚ್ಚು ಮನೆಗಳಿದ್ದು ಗ್ರಾಮದಲ್ಲಿ ಕುಡಿಯುವ ನೀರಿನ ಪೂರೈಕೆಗಾಗಿ ಜನಜೀವನ್ ಮಿಷನ್ ಯೋಜನೆಯಡಿಯಲ್ಲಿ ಕಾಮಗಾರಿ ನಡೆಯುತ್ತಿದ್ದು.ಕುಡಿಯುವ ನೀರನ್ನ ಸರಿಯಾಗಿ ಪೂರೈಕೆ ಮಾಡುತ್ತಿಲ್ಲ ಎಂದು ಆರೋಪಿಸಿ ಖಾಲಿಕೊಡದೊಂದಿಗೆ ಕೆ ಶೆಟ್ಟಹಳ್ಳಿ ಗ್ರಾಮ ಪಂಚಾಯ್ತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಬಗೆಗೆ ಕಳೆದ ನಾಲ್ಕು ತಿಂಗಳಿಂದಲೂ ಗ್ರಾಮ ಪಂಚಾಯ್ತಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾರೂ ಸ್ಪಂಧಿಸುತ್ತಿಲ್ಲ.ಇದರಿಂದ ಬೇಸತ್ತ ನಾವು ಪ್ರತಿಭಟನೆ ನಡೆಸುತ್ತಿರುವುದಾಗಿ ಗ್ರಾಮಸ್ಥರು ತಿಳಿಸಿದರು
ವಾಟರ್ ಮ್ಯಾನ್ ಆಗಿ ಕಾರ್ಯನಿರ್ವಹಿಸ್ತಿದ್ದ ಗೋಪಾಲ್ ಅವರು ನಮಗೆ ನೀರು ಬಿಡದೆ ತೊಂದರೆ ಕೊಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಅವರ ವಿರುದ್ದ ಕ್ರಮಕೈಗೊಳ್ಳೊ ಬಗೆಗೆ ನಿರ್ಧರಿಸಲಾಗುವುದು
ಸದ್ಯಕ್ಕೆ ಗ್ರಾಮಸ್ಥರಿಗೆ ಕುಡಿಯುವ ನೀರು ಪೂರೈಸಲು ಇಂದೆ ಕ್ರಮ ಕೈಗೊಳ್ಳುವುದಾಗಿ ಗ್ರಾಮ ಪಂಚಾಯ್ತಿ ಪಿಡಿಒ ಶೋಭರಾಣಿ ತಿಳಿಸಿದರು










