• Home
  • ದೈನಂದಿನ-ಸುದ್ದಿ
  • ಕಬ್ಬು ಬೆಳೆಗಾರರ ನಿರಂತರಹೋರಾಟಕ್ಕೆ ಕೊನೆಗೂಫಲ: ಪ್ರತಿ ಟನ್ ಕಬ್ಬಿಗೆ ರೂ 3,300 ನಿಗದಿ….
Image

ಕಬ್ಬು ಬೆಳೆಗಾರರ ನಿರಂತರಹೋರಾಟಕ್ಕೆ ಕೊನೆಗೂಫಲ: ಪ್ರತಿ ಟನ್ ಕಬ್ಬಿಗೆ ರೂ 3,300 ನಿಗದಿ….

ಸಂಜೆ ಇಂಪು, ಬೆಂಗಳೂರು: ರೈತರ ಪ್ರತಿಭಟನೆಯ ಕಿಚ್ಚು ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ, ಪ್ರತಿ ಟನ್ ಕಬ್ಬಿಗೆ 3,300 ರೂ ದರ ನಿಗದಿ ಮಾಡಿದ್ದಾರೆ.
ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಂಬಲ ಬೆಲೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಬೆಳಗಾವಿ,ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು.ಆದರೆ, ಸಕ್ಕರೆ ಕಾರ್ಖಾನೆ ಮಾಲೀಕರು ಈ ಬೇಡಿಕೆಯನ್ನು ತಿರಸ್ಕರಿಸಿದ್ದು, 3,500 ರೂಪಾಯಿ ನೀಡಿದರೆ ಭಾರಿ ನಷ್ಟವಾಗುತ್ತದೆ ಎಂದು ವಾದಿಸಿದ್ದರು.ಅಂತಿಮವಾಗಿ ಸಿಎಂ ಸಿದ್ದರಾಮಯ್ಯ ಅವರು ಇಂದು ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ, ಪ್ರತಿ ಟನ್‌ಗೆ 3,300 ರೂಪಾಯಿಗಳನ್ನು ನಿಗದಿಪಡಿಸಿದ್ದಾರೆ.

ಕಬ್ಬು ಬೆಳೆಗಾರರ ಕಿಚ್ಚು: ಕೇಂದ್ರ ವಿರುದ್ಧ ಕೈತೋರಿಸಿದ ಸಿದ್ದರಾಮಯ್ಯ :ಪ್ರಹ್ಲಾದ್ ಜೋಶಿ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಪರದಾಡುತ್ತಾ ಹತಾಶೆಯಲ್ಲಿರುವ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತಾನಾಡುತ್ತಾ ರಾಜ್ಯದ ರೈತರು ಮತ್ತು ಜನರನ್ನು ದಾರಿತಪ್ಪಿಸಲು ದುಸ್ಸಾಹಸಕ್ಕೆ ಕೈಹಾಕಿದ್ದಾರೆ. ಸಿದ್ದರಾಮಯ್ಯ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಆಲಿಸುವಲ್ಲಿ ವಿಫಲರಾಗಿದ್ದು ಕೇಂದ್ರ ಸರ್ಕಾರದ ಮೇಲೆ ಬೆರಳು ತೋರಿ ಪಲಾಯನವಾದ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಸಿದ್ದರಾಮಯ್ಯ ಉಲ್ಲೇಖಿಸಿದ ಸಂಸತ್ತಿನ ಉತ್ತರದಲ್ಲಿ 30-06-2025ರವರೆಗಿನ ದತ್ತಾಂಶ ಮಾತ್ರ ಇದೆ. ಆದರೆ ಎಥೆನಾಲ್ ಸರಬರಾಜು ವರ್ಷವು ನವೆಂಬರ್ ನಿಂದ ಪ್ರಾರಂಭವಾಗಿ ಅಕ್ಟೋಬರ್ ನಲ್ಲಿ ಕೊನೆಗೊಳ್ಳುತ್ತದೆ. ಸಂಸತ್ತಿನಲ್ಲಿ ನೀಡಲಾದ ದತ್ತಾಂಶವು 30.06.2025ರವರೆಗಿನದ್ದು ಮಾತ್ರ.2024-25ರಲ್ಲಿ ಕರ್ನಾಟಕದಿಂದ ತೈಲ ಮಾರುಕಟ್ಟೆಗೆ ಕಂಪನಿಗಳಿಗೆ(OMC) 139.8 ಕೋಟಿ ಲೀಟರ್‌ ಎಥೆನಾಲ್‌ ಅನ್ನು ಪೋರೈಸಿವೆ. ತಮ್ಮ ಅಧಿಕಾರಿಗಳಿಂದ ಸರಿಯಾದ ಮಾಹಿತಿ ಪಡೆದು ಅದನ್ನು ಅರ್ಥಮಾಡಿಕೊಂಡು ನಂತರ ಮಾತನಾಡಬೇಕು ಎಂಬ ಕನಿಷ್ಠ ಪರಿಜ್ಞಾನವೂ ಇಲ್ಲದೆ ಇರುವುದು ನಿಜಕ್ಕೂ ರಾಜ್ಯದ ದುರಂತ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

2004-2014ರವರೆಗೆ ಕಬ್ಬು ಬೆಳೆದ ರೈತರಿಗೆ ಸರಿಯಾದ ಸಮಯದಲ್ಲಿ ಹಣ ಪಾವತಿಯಾಗುತ್ತಿರಲಿಲ್ಲ. ಈ ವಿಳಂಬ ಧೋರಣೆಯಿಂದ ರೈತರು ಸಂಕಷ್ಟದಲ್ಲಿದ್ದರು. ಅತಿ ಕಡಿಮೆ FRP/ MSP,2005ರಲ್ಲಿಯೇ ಎಥೆನಾಲ್ ಮಿಶ್ರಣದ ಪ್ರಸ್ತಾಪವನ್ನು ಮಾಡಿದ್ದರೂ, ಎಥೆನಾಲ್ ಬಗ್ಗೆ ಕಿಂಚಿತ್ತೂ ಯೋಚನೆಯೂ ಮಾಡಿರಲಿಲ್ಲಾ. 2013-14ರಲ್ಲಿ ಕಬ್ಬು ಬೆಳೆ ಖರೀದಿ 57,104 ಕೋಟಿ ರೂ.ಗಳಷ್ಟಿತ್ತು. ಆದರೆ 2024-25ರ ಮೌಲ್ಯ 1,02,687 ಕೋಟಿ ರೂಪಾಯಿ ಆಗಿದೆ. ಬೆಂಬಲ ಬೆಲೆ (ಈಖP) 2013-14ರಲ್ಲಿ 210 ರೂ.ಗಳಷ್ಟಿತ್ತು. ಆದರೆ 2025 26ರ ಸಕ್ಕರೆ ಹಂಗಾಮಿನಲ್ಲಿ ಶೇ. 10.25ರಷ್ಟು ಚೇತರಿಕೆಯೊಂದಿಗೆ ಕ್ವಿಂಟಾಲ್ಗೆ 355 ರೂಪಾಯಿಗೆ ಏರಿಕೆಯಾಗಿದೆ.
ಇದು ನಮ್ಮ ಸರ್ಕಾರದ ಬದ್ದತೆ ಸಿದ್ದರಾಮಯ್ಯನವರೇ. 2013-14 ರಿಂದ 2024-25 ರವರೆಗೆ ಇಂಧನ ದರ್ಜೆಯ ಎಥೆನಾಲ್
ಉತ್ಪಾದನೆ ಮತ್ತು OMCಗಳಿಗೆ ಪೂರೈಕೆ 26 ಪಟ್ಟು ಹೆಚ್ಚಾಗಿದೆ. 2013-14 ರಿಂದ ಕಬ್ಬು ಆಧಾರಿತ ಡಿಸ್ಟಿಲರಿಗಳು ಮತ್ತು ಧಾನ್ಯ ಆಧಾರಿತ ಡಿಸ್ಟಿಲರಿಗಳು 2.18 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚು ಆದಾಯವನ್ನು ಗಳಿಸಿವೆ. ಇದರಲ್ಲಿ ಕಬ್ಬು ಆಧಾರಿತ ಡಿಸ್ಟಿಲರಿಗಳು (26.10.2025 ರಂತೆ) OMCಗಳಿಗೆ ಎಥೆನಾಲ್ ಮಾರಾಟದಿಂದ 1.29 ಲಕ್ಷ ಕೋಟಿ ರೂಪಾಯಿ ಗಳಿಸಿವೆ. ಇದು ಕಬ್ಬಿನ ಗಿರಣಿಗಳಿಗೆ ರೈತರ ಕಬ್ಬಿನ ಬಾಕಿಯನ್ನು ಸಕಾಲಿಕವಾಗಿ ಪಾವತಿಸಲು ಸಹಾಯ ಮಾಡಿದೆ. ರಪ್ತುಗಳನ್ನು ಸಕಾಲಿಕವಾಗಿ ಅನುಮತಿಸಲಾಗಿದೆ. ಸಕ್ಕರೆ ಬೆಲೆಯಲ್ಲಿ ಸಮತೋಲನವನ್ನು ಕಾಯ್ದುಕೊಳ್ಳುವುದು ನಮ್ಮ ಸರ್ಕಾರದ ಬದ್ದತೆ. ಕಳೆದ 10 ವರ್ಷದ ಅವಧಿಯಲ್ಲಿ 10 LMTಗೆ ಅವಕಾಶ ನೀಡಲಾಗಿತ್ತು. ಈ ವರ್ಷ 15 LMTಗೆ ಅವಕಾಶ ನೀಡಲಾಗುತ್ತಿದೆ. ಪ್ರಹ್ಲಾದ್ ಜೋಶಿ-ಸಿದ್ದರಾಮಯ್ಯ ಕಬ್ಬು ಬೆಳೆಗಾರರ ಕಿಚ್ಚು: ಬೆಳಗಾವಿಯಲ್ಲಿ ಪೊಲೀಸರ ಲಾಠಿ ಚಾರ್ಜ್ ವಿರುದ್ದ ಸಿಡಿದೆದ್ದ ರೈತರು; ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ!

ಇಡೀ ದೇಶಕ್ಕೆ ಒಂದು ನೀತಿಯನ್ನು ಜಾರಿ ಮಾಡುವುದು ಕೇಂದ್ರ ಸರ್ಕಾರದ ಕೆಲಸ. ನೀವು ರಾಜ್ಯದಲ್ಲಿ ಬೆಳೆಗಾರರ ಬೇಡಿಕೆಯ ಪ್ರಕಾರವಾಗಿ ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿ ಕೇವಲ ಸುಳ್ಳು ಹೇಳಿಕೊಂಡು, ಸುಳ್ಳಿನ ಮನೆಯನ್ನು ಕರ್ನಾಟಕದಲ್ಲಿ ನಿರ್ಮಿಸಿಕೊಂಡು ಜನರನ್ನು ರೈತರನ್ನು ಬೀದಿಗೆ ತಳ್ಳುವ ನೀಚ ಕೆಲಸ ಮಾಡಿದ್ದೀರಾ. ಅಂದು ವಿರೋಧ ಪಕ್ಷದಲ್ಲಿದ್ದಾಗ ಬೆಲೆ ನಿಗದಿ ಮಾಡಿ, ಇದೀಗ ಅಧಿಕಾರದಲ್ಲಿರುವಾಗ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜಾರಿಕೊಳ್ಳುವುದೇ ನಿಮ್ಮ ಮೂಲಭೂತ ಕೆಲಸವಾಗಿದೆಯಾ ಸಿದ್ದರಾಮಯ್ಯನವರೇ? ಗ್ಯಾರಂಟಿಗಳು
ಮಾತ್ರನೇ ನಿಮ್ಮ ಸರ್ಕಾರದ ಆಡಳಿತವಾಗಿದೆ ಹೊರೆತು ರಾಜ್ಯದ ಅಭಿವೃದ್ಧಿಯಲ್ಲ. ನಿಮ್ಮ ದುರಾಡಳಿತದ ಪರಮಾವಧಿಯಿಂದಲೇ ಇಂದು ರೈತರು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ.

Releated Posts

ಕೆಐಐಟಿ-ಡಿಯು ವಿಶ್ವವಿದ್ಯಾಲಯಕ್ಕೆ ಒಡಿಶಾದಲ್ಲಿ ಅಗ್ರಸ್ಥಾನ. ವಿವಿಯು ಏಷ್ಯಾದಲ್ಲೇ 294 ನೇ ಸ್ಥಾನ ಪಡೆದಿದೆ

ಸಂಜೆ ಇಂಪು,ಸುದ್ದಿ ಬೆಂಗಳೂರು: ಇಲ್ಲಿನ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ರ್ಟಿಯಲ್ ಟೆಕ್ನಾಲಜಿ (ಕೆಐಐಟಿ-ಡಿಯು) ಡೀಮ್ಡ್ ವಿಶ್ವವಿದ್ಯಾಲಯವು ಕ್ಯೂಎಸ್ ಏಷ್ಯಾ ವಿಶ್ವವಿದ್ಯಾಲಯ ರ್ಯಾಂಕಿಂಗ್ 2026 ನಲ್ಲಿ…

ByByRavi Lalipalya Nov 7, 2025

ಶ್ರೀರಂಗಪಟ್ಟಣದಲ್ಲಿ ರಂಗನಾಥನ ಬ್ರಹ್ಮ ರಥೋತ್ಸವ.

ನಾಳೆ ನಡೆಯಲಿರೊ ರಂಗನಾಥಸ್ವಾಮಿಯ ಬ್ರಹ್ಮರಥೋಥ್ಸವಕ್ಕೆ ‌ದೇವಾಲಯದ ಆಡಳಿತ ಮಂಡಳಿ ಸಕಲ ರೀತಿಯಲ್ಲೂ ಸಿದ್ದವಾಗಿದೆ ಬೆಳಿಗ್ಗೆ 6 ಗಂಟೆಗೆ ಸೂರ್ಯ ಚಂದ್ರ ಮಂಡಲದ ರಥಸಪ್ತಮಿ ನಡೆಯಲಿದ್ದು…

ByByRavi Lalipalya Feb 4, 2025

ಮಂಡ್ಯ : ಕುಡಿಯುವ ನೀರು ಪೂರೈಕೆಗೆ ಒತ್ತಾಯ ಖಾಲಿಕೊಡದೊಂದಿಗೆ ಗ್ರಾಮಸ್ಥರ ಪ್ರತಿಭಟನೆ

ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಚಿನ್ನಾಯಕನಹಳ್ಳಿ ಗ್ರಾಮಸ್ಥರು ಗ್ರಾ ಪಂ ಕಚೇರಿ ಎದುರು ಖಾಲಿ ಕೊಡದೊಂದಿಗೆ ಪ್ರತಿಭಟನೆ ನಡೆಸಿದರು.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಚಿನ್ನಾಯಕನಹಳ್ಳಿಯಲ್ಲಿ…

90 ಕೋ ಟಿ ರೂ ವಚ್ಚದಲ್ಲಿ ವಿಸಿ ನಾಲೆ ಉಪ ನಾಲೆ ಆಧುನೀಕರಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ದರ್ಶನ್ ಪುಟ್ಟಣಯ್ಯ

ಮಂಡ್ಯ: ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣಯ್ಯ 90 ಕೋಟಿ ರೂ ವೆಚ್ಚದಲ್ಲಿ ವಿಸಿ ನಾಲೆಯ ಉಪ ನಾಲೆ ಆಧುನೀಕರಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು,ಮಂಡ್ಯ ಜಿಲ್ಲೆ…

Leave a Reply

Your email address will not be published. Required fields are marked *

Scroll to Top